ಮನೆ ರಾಷ್ಟ್ರೀಯ ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು..!

ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು..!

0

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್ ಅವರು 20 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ. ಜೋರ್ಹತ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಗೌರವ್ ಗೊಗೊಯ್ ಅವರನ್ನು ಬಿಜೆಪಿಯ ಅಭ್ಯರ್ಥಿ ಹಿತೇಂದ್ರ ನಾಥ್ ಗೋಸ್ವಾಮಿ ಅವರು ಸೋಲಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಇದೇ ಜೋರ್ಹತ್ ಕ್ಷೇತ್ರದಿಂದ ಜಯಗಳಿಸಿದ್ದ ಗೊಗೊಯ್ ಅವರಿಗೆ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ನೆಲವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಅಸ್ಸಾಂನಲ್ಲಿ ಸರ್ಕಾರ ರಚಿಸಲಿದೆ ಎಂದು ಗೊಗೊಯ್ ವಿಶ್ವಾಸ ವ್ಯಕ್ತಪಡಿಸಿದ್ದರು, ಆದರೆ ಈ ವೈಯಕ್ತಿಕ ಸೋಲು ಕಾಂಗ್ರೆಸ್ ಪಾಳಯಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಮಧ್ಯಾಹ್ನ ಟ್ರೆಂಡ್‌ ಪ್ರಕಾರ ಅಸ್ಸಾಂನಲ್ಲಿ ಬಿಜೆಪಿ 99, ಕಾಂಗ್ರೆಸ್‌ 24, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 126 ವಿಧಾನಸಭಾ ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಈ ಜಯದೊಂದಿಗೆ ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್‌ ಸಾಧನೆ ಮಾಡಿದೆ.