ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.
ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ನಂತರ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಟ್ರಾವೆಲ್ಸ್ ಬ್ಯುಸಿನೆಸ್ನಲ್ಲಿ ಲಾಸ್ ಆಗಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಕಳ್ಳತನ ಮಾಡಿದ್ದ 1.13 ಕೋಟಿ ಮೌಲ್ಯದ ಚಿನ್ನಾಭರಣಗಳನ್ನ ಅಡವಿಟ್ಟು ಹಣ ಪಡೆದಿದ್ದು, ಆ ಹಣ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲ್ಯಾನ್ ಮಾಡಿದ್ದರು. ಆದ್ರೆ, ಕಾಲ್ ಮಾಡಿದಾಗ ರಿಸೀವ್ ಮಾಡದಿದ್ದಾಗ ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.

















