ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಚಿವ ಆರ್.ಬಿ.ತಿಮ್ಮಾಪುರ್ ತಿಳಿಸಿದ್ದಾರೆ. ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹೇಳ್ತಿಲ್ಲ. ಮಾಧ್ಯಮಗಳು ಹೇಳ್ತಿವೆ. ಯತೀಂದ್ರ ಹೇಳೋದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು. ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಮಲ್ಲಿಕಾರ್ಜುನ ಖರ್ಗೆ ಡೇಟ್ ಕೊಟ್ಟು ಕರೆಯುತ್ತೇನೆ ಅಂತ ಹೇಳಿದ್ದಾರೆ. ಆ ಡೇಟ್ ಇನ್ನು ಬಂದಿಲ್ಲ. ನಾಯಕತ್ವ ಬದಲಾವಣೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದು ತಿಳಿಸಿದರು.
















