ಮನೆ ರಾಜ್ಯ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್; ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್..!

ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್; ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್..!

0

ರಾಮನಗರ : ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ.

ಇಷ್ಟು ದಿನ ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಆದರೆ, ರಾಮನಗರದ ಪ್ರಯಾಣಿಕರ ಬೇಡಿಕೆ ಮೇರೆಗೆ ಒಡೆಯರ್ ಎಕ್ಸ್‌ಪ್ರೆಸ್ ನಿಲುಗಡೆಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ.

ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ. ಸಿ.ಎನ್.ಮಂಜುನಾಥ್, ಶಾಸಕ ಇಕ್ಬಾಲ್ ಹುಸೇನ್ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ.