ಮನೆ ರಾಜ್ಯ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ವಿಧಾನಸೌಧ, ಕಾರ್ಪೋರೇಷನ್ ಸುತ್ತಮುತ್ತ ಮಳೆಯಾಗಿದೆ.