ಮನೆ ಸುದ್ದಿ ಜಾಲ ಚುನಾವಣಾ ಹಿಂಸಾಚಾರದಿಂದ ಇಬ್ಬರು ಸಾವು ; ಆರೋಪಿಗಳನ್ನು ಬಂಧಿಸುವಂತೆ ಆದೇಶ

ಚುನಾವಣಾ ಹಿಂಸಾಚಾರದಿಂದ ಇಬ್ಬರು ಸಾವು ; ಆರೋಪಿಗಳನ್ನು ಬಂಧಿಸುವಂತೆ ಆದೇಶ

0

ಕೋಲ್ಕತ್ತಾ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮತ್ತು ದಾಳಿಯಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣ ಬಂಧಿಸುವಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎನ್ನಲಾಗಿದ್ದು. ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಿದ ನಂತರ ಆಯೋಗ ಈ ನಿರ್ದೇಶನ ನೀಡಿದೆ ಎನ್ನಲಾಗುತ್ತಿದೆ.

ಇದರಿಂದ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಕೋಲ್ಕತ್ತಾ ಪೊಲೀಸ್ ಆಯುಕ್ತರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮಹಾನಿರ್ದೇಶಕರು, ಎಲ್ಲಾ ಜಿಲ್ಲಾ ನ್ಯಾಯಾಧೀಶರು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸಿಇಸಿ ತಿಳಿಸಿದೆ.ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ದಾಳಿಯಂತಹ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಬೇಕು ಎಂದಿದೆ. ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದ ಕೆಲವು ಭಾಗಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತವಾಗಿದ್ದು, ಈ ಪರಿಸ್ಥಿತಿಯನ್ನು ಚುನಾವಣಾ ಆಯೋಗ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಈ ಪ್ರಕರಣ ಕುರಿತು ಮಾತನಾಡಿರುವ ಹಿರಿಯ ಅಧಿಕಾರಿಯೊಬ್ಬರು, ಹೆಚ್ಚು ಜಾಗರೂಕರಾಗಿರುವಂತೆ ಮತ್ತು ಶಾಂತಿ ಕದಡುವ ಪ್ರಯತ್ನ ಹತ್ತಿಕ್ಕಲು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ಮತ್ತು ಕೇಂದ್ರ ಪಡೆಗಳ ನಡುವೆ ಸಂಘಟಿತ ಪ್ರಯತ್ನಗಳೊಂದಿಗೆ ರಾಜ್ಯ ಅಧಿಕಾರಿಗಳು ಜಿಲ್ಲೆಗಳಾದ್ಯಂತ ಜಾಗರೂಕತೆ ತೀವ್ರಗೊಳಿಸಿದ್ದಾರೆ ಎಂದು ಹೇಳಿದ್ದಾರೆ. ಮಂಗಳವಾರ (ಮೇ 5) ರಂದು ಸಂಜೆ ನ್ಯೂ ಟೌನ್ ಪ್ರದೇಶದಲ್ಲಿ ವಿಜಯೋತ್ಸವ ಮೆರವಣಿಗೆಯ ವೇಳೆ ಟಿಎಂಸಿ ಕಾರ್ಯಕರ್ತರು ಥಳಿಸಿದ್ದರಿಂದ ಬಿಜೆಪಿ ಕಾರ್ಯಕರ್ತ ಮಧು ಮಂಡಲ್ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ, ಬಿರ್ಭೂಮ್‌ನ ನಾನೂರ್‌ನಲ್ಲಿ ಟಿಎಂಸಿ ಕಾರ್ಯಕರ್ತ ಅಬೀರ್ ಶೇಖ್ ಅವರನ್ನು ಬಿಜೆಪಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಇರಿಂದ ರಾಜ್ಯದ ಹಲವು ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಕಾಣುತ್ತಿದ್ದಂತೆ ಬೋಲ್ಪುರದ ಮತ ಎಣಿಕೆ ಕೇಂದ್ರದ ಬಳಿಯಿದ್ದ ಟಿಎಂಸಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಕೇಂದ್ರ ಭದ್ರತಾ ಪಡೆಗಳ ಮುಂದೆಯೇ ಕೃತ್ಯ ಎಸಗಲಾಗಿದೆ. ಟಿಎಂಸಿ ಕೌನ್ಸಿಲರ್​ಗಳ ಮೇಲೆ ಹಲ್ಲೆ ನಡೆದಿದ್ದು, ಕಿರ್ನಹಾರ್​ನಲ್ಲಿ ಟಿಎಂಸಿ ಕಾರ್ಯಕರ್ತನ ಅಂಗಡಿಗೆ ಬೆಂಕಿ ಹಚ್ಚಲಾಗಿದೆ. ಜಿಲ್ಲೆಯ ವಿವಿಧೆಡೆ ದಾಳಿಗಳು ನಡೆದಿರುವ ಕುರಿತು ವರದಿಯಾಗಿದೆ. ನಿಚುಪಟ್ಟಿಯಲ್ಲಿರುವ ಟಿಎಂಸಿ ಅಭ್ಯರ್ಥಿ ಅನುಬ್ರತಾ ಮೊಂಡಲ್ ಅವರ ನಿವಾಸದೆದುರು ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ ಎನ್ನಲಾಗುತ್ತಿದೆ.