ಬೆಂಗಳೂರು ಹೆಚ್ಐವಿ ಸೋಂಕಿನಿಂದ ಬಳಲುತ್ತಿದ್ದೇನೆ ಎಂದು ಪತ್ನಿ ಮತ್ತು ಆಕೆಯ ಕುಟುಂಬದವರು ನಿಂದಿಸಿದ್ದಾರೆ ಎಂಬ ಆಧಾರದ ಮೇಲೆ ಪತಿಗೆ ಕೌಟುಂಬಿಕ ನ್ಯಾಯಾಲಯ ಮಂಜೂರು ಮಾಡಿದ್ದ ವಿಚ್ಛೇದನ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ, ಆದೇಶ ಹೊರಡಿಸಿದೆ ಎನ್ನಲಾಗಿತ್ತು. ಆದರೆ ಈಗ ಪತಿ ಪರವಾಗಿರುವ ವಿಚ್ಛೇದನ ಆದೇಶ ರದ್ದು ಕೋರಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮತ್ತು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರನ್ನೊಳಗೊಂಡ ಕಲಬುರಗಿ ವಿಭಾಗೀಯ ಪೀಠ ಈ ಆದೇಶ ನೀಡಿದೆ ಎನ್ನಲಾಗಿದೆ. ಅಲ್ಲದೇ, ದಾಖಲೆಯಿಲ್ಲದೇ ಅಂತಹ ಗಂಭೀರ ಆರೋಪವನ್ನು ಒಪ್ಪಲಾಗದು ಎಂದು ತಿಳಿಸಿದ್ದು, ಹೊಸದಾಗಿ ಪ್ರಕರಣವನ್ನು ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ರವಾನಿಸಲಾಗಿದೆ.
ಈ ಕುರಿತು ಹೆಚ್‌ಐವಿ/ ಏಡ್ಸ್ ಸೋಂಕು ತಗಲಿರುವ ಆರೋಪ ಸಾಬೀತಾದಾರೆ ಅದು ಮಾನಸಿಕ ಕ್ರೌರ್ಯವಾಗುತ್ತದೆ. ಆದರೆ, ಈ ಆರೋಪಕ್ಕೆ ಪೂರಕವಾಗಿ ದಾಖಲೆಗಳನ್ನು ಒದಗಿಸಿಲ್ಲ. ಕೌಟುಂಬಿಕ ನ್ಯಾಯಾಲಯ ಪತಿಯ ಹೇಳಿಕೆಗಳನ್ನು ಸ್ವೀಕರಿಸುವ ಮೂಲಕ ಆದೇಶ ನೀಡಿದೆ. ಇದಕ್ಕೆ ಅವಕಾಶವಿಲ್ಲ. ಕ್ರೌರ್ಯ ಸಾಬೀತುಪಡಿಸಲು ಸೂಕ್ತ ಮತ್ತು ಆಸಕ್ತಿದಾಯಕ ದಾಖಲೆಗಳನ್ನು ಪತಿ ಒದಗಿಸಿಲ್ಲ ಎಂದು ತಿಳಿಸಿದೆ ಎನ್ನಲಾಗುತ್ತಿದೆ. ಆದರಿಂದ ಯಾವುದೇ ಸಾಕ್ಷಿ ಇಲ್ಲದೇ ಪತಿಯ ಆರೋಪವನ್ನು ಒಪ್ಪಿಕೊಂಡಿರುವ ಕೌಟುಂಬಿಕ ನ್ಯಾಯಾಲಯವು ದಾಖಲೆ ಇಲ್ಲ ಎಂದು ಪತ್ನಿಯ ವಾದವನ್ನು ತಳ್ಳಿಹಾಕಿದೆ. ಪತಿಯು ಅನೈತಿಕ ಸಂಬಂಧ ಹೊಂದಿದ್ದರಿಂದ ಪತ್ನಿ ಪೋಷಕರ ಮನೆಯಲ್ಲಿ ನೆಲೆಸಿದ್ದಾರೆ ಎಂದು ವಕೀಲರು ಪೀಠಕ್ಕೆ ವಿವರಿಸಿದರು.

















