ಬೆಂಗಳೂರು(Bengaluru): ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪಿಎಸ್ ಐ ಹಗರಣ ಕುರಿತು ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯನ್ನೇ ಬಂಧಿಸಲಾಗಿದೆ. ಇಂತಹ ಕ್ರಮ ಹಿಂದಿನ ಸರ್ಕಾರದಲ್ಲಿ ನಡೆದಿದೆಯಾ..? ಕಾಂಗ್ರೆಸ್ ಗೆ ಆಪಾದನೆ ಮಾಡಲು ನೈತಿಕತೆ ಇಲ್ಲ . ಕಾಂಗ್ರೆಸ್ ನವರು ಸಿಎಂ ಗೃಹ ಸಚಿವರನ್ನು ಅಭಿನಂದಿಸಬೇಕು. ಸಿಎಂ ಗೃಹ ಸಚಿವರು ಯಾರನ್ನು ರಕ್ಷಣೆ ಮಾಡುತ್ತಿಲ್ಲ. ಬೇಕಾಬಿಟ್ಟಿ ಒಬ್ಬರ ಚಾರಿತ್ರ್ಯವಧೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.














