ಮನೆ ಪ್ರಕೃತಿ ಸಣ್ಣ ಪ್ರಮಾಣದ ಭೂಕಂಪ: ಆತಂಕ ಪಡುವ ಅಗತ್ಯವಿಲ್ಲ- ಸಚಿವ ಆರ್.ಅಶೋಕ್

ಸಣ್ಣ ಪ್ರಮಾಣದ ಭೂಕಂಪ: ಆತಂಕ ಪಡುವ ಅಗತ್ಯವಿಲ್ಲ- ಸಚಿವ ಆರ್.ಅಶೋಕ್

0

ಮಡಿಕೇರಿ(Madikeri): ರಾಜ್ಯದ ಕರಾವಳಿ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಡಿಕೇರಿಯಲ್ಲಿ ಭೂಕುಸಿತದಿಂದ ಅಪಾರ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಭೂಕಂಪನ ಉಂಟಾದ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ನಡುವೆ ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್,  ಸಣ್ಣ ಪ್ರಮಾಣದ ಭೂಕಂಪವಾಗುತ್ತಿದೆ ಅಷ್ಟೆ. ಆತಂಕ ಪಡುವ ಅಗತ್ಯವಿಲ್ಲ. ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ. ಹೈದರಾಬಾದ್ ಭೂಗರ್ಭ ಶಾಸ್ತ್ರಜ್ಞರು ಬಂದಿದ್ದಾರೆ.  ನಾಳೆ ವರದಿ ನೀಡುತ್ತಾರೆ ಎಂದರು.

ಮೈಸೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಪಂಚಾಯತಿ ವ್ಯಾಪ್ತಿಯ ಕರ್ತೋಜಿಯಲ್ಲಿ ಭೂಕುಸಿತವನ್ನು ಖುದ್ದು ಪರಿಶೀಲನೆ ನಡೆಸಿ, ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಜುಲೈ11 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲೇ ಹೆಚ್ಚು ಮಳೆ ಆಗುವ ಕಾರಣಕ್ಕೆ ಗುರುವಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.