ಮನೆ ಸುದ್ದಿ ಜಾಲ ತಾಯಿಯನ್ನು ಚಿಕಿತ್ಸೆಗೆ ಕರೆತಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿದ ಆಸ್ಪತ್ರೆ ಕೆಲಸಗಾರ : ವಿಜಯನಗರ

ತಾಯಿಯನ್ನು ಚಿಕಿತ್ಸೆಗೆ ಕರೆತಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿದ ಆಸ್ಪತ್ರೆ ಕೆಲಸಗಾರ : ವಿಜಯನಗರ

0

ವಿಜಯನಗರ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು ಎನ್ನಲಾಗಿದೆ.

ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ‘ಡಿ’ ನೌಕರನಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿಯಾಗಿದ್ದಾನೆ, ನಂತರ ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್‌ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ ಎನ್ನಬಹುದಾಗಿದೆ.