ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಶುಕ್ರವಾರ (ಮೇ 8) ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.















