ಮನೆ ಸುದ್ದಿ ಜಾಲ ಹಡಗಿಗೆ ಬೆಂಕಿ : ಹಡಗಿನಲ್ಲಿದ್ದ ಭಾರತೀಯ ನಾವಿಕ ಸಾವು

ಹಡಗಿಗೆ ಬೆಂಕಿ : ಹಡಗಿನಲ್ಲಿದ್ದ ಭಾರತೀಯ ನಾವಿಕ ಸಾವು

0

ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ಹಡಗಿನಲ್ಲಿದ್ದ ಮರದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಭಾರತೀಯ ನಾವಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ಶುಕ್ರವಾರ (ಮೇ 8) ರಂದು ಈ ಘಟನೆ ನಡೆದಿದ್ದು, ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಪತ್ತೆಯಾಗಿಲ್ಲ. ಈ ಹಡಗಿನಲ್ಲಿದ್ದ ಸಿಬ್ಬಂದಿಗಳನ್ನು ಈ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಹಡಗಿನೊಂದು ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಾಗತಿಕ ತೈಲ ಪೂರೈಕೆಯ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿ ನಡುವಿನ ಪ್ರಮುಖ ಕಡಲ ಸಂಪರ್ಕ ಸ್ಥಳವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಉದ್ವಿಗ್ನತೆಗೆ ಒಳಗಾಗಿದ್ದು, ಈ ನಡುವೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಸರಕುಗಳನ್ನು ಸಾಗಿಸುತ್ತಿದ್ದ ಹಡಗು 18 ಭಾರತೀಯ ಸಿಬ್ಬಂದಿಗಳನ್ನು ಹೊತ್ತುಕೊಂಡು ನಿನ್ನೆ ಹಾರ್ಮುಜ್ ಜಲಸಂಧಿಯಯಲ್ಲಿ ಸಾಗುತ್ತಿದ್ದಾಗ. ಅದರಲ್ಲಿದ್ದ ಮರದ ದೋಣಿ ಬಳಿ ಬೆಂಕಿ ಹೊತ್ತಿಕೊಂಡ ನಂತರ ಅದು ಮಗುಚಿಬಿದ್ದಿದೆ. ಈ ಘಟನೆಯಲ್ಲಿ ನಾಲ್ವರಿಗೆ ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಗಾಯಾಳುಗಳು ದುಬೈನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಸುರಕ್ಷಿತವಾಗಿದ್ದಾರೆ. ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ನಿನ್ನೆ ರಾತ್ರಿ ರಕ್ಷಿಸಲ್ಪಟ್ಟ ಭಾರತೀಯ ಪ್ರಜೆಗಳನ್ನು ಭೇಟಿಯಾಗಿದ್ದಾರೆ. ರಾಯಭಾರಿ ಕಚೇರಿ ಸಿಬ್ಬಂದಿಗಳ ಸಂಪರ್ಕದಲ್ಲಿದ್ದು, ಅಗತ್ಯ ನೆರವನ್ನು ನೀಡುವ ಕುರಿತು ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ ಎನ್ನಲಾಗುತ್ತಿದೆ.