ಮನೆ ರಾಜ್ಯ ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಸಭೆ ಕರೆದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಸಭೆ ಕರೆದ ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru): ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಜುಲೈ 8) ಮಹತ್ವದ ಸಭೆ ಕರೆದಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಸಿಇಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ.

ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಈ ಮಳೆಹಾನಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.