ಮನೆ ಸುದ್ದಿ ಜಾಲ SC-ST ಗೆ ಮೀಸಲಾತಿ ಕಡಿತ ಕುರಿತು ಜನಜಾಗೃತಿ : ಬೊಮ್ಮಾಯಿ

SC-ST ಗೆ ಮೀಸಲಾತಿ ಕಡಿತ ಕುರಿತು ಜನಜಾಗೃತಿ : ಬೊಮ್ಮಾಯಿ

0

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಹೆಚ್ಚಿಸಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯದ ಜನತೆಯಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದು ತಮ್ಮ ನಿವಾಸದಲ್ಲಿಂದು ನಡೆದ ಬಿಜೆಪಿಯ ಎಸ್ಸಿ-ಎಸ್ಟಿ ಮುಖಂಡರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು ಎನ್ನಲಾಗಿದೆ.

ಹಾಗೂ  ರಾಜ್ಯ ಸರ್ಕಾರ ಎಸ್ಸಿ-ಎಸ್ಟಿ ಮತ್ತು ಒಬಿಸಿ ಜನಾಂಗಕ್ಕೆ ಬಹಳ ದೊಡ್ಡ ಅನ್ಯಾಯ ಮಾಡುತ್ತಿದೆ. ಅಹಿಂದ ಹೆಸರಲ್ಲಿ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯನವರು ಯಾವ ವರ್ಗದಿಂದ ಬೆಂಬಲ ಪಡೆದಿದ್ದಾರೋ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಎಸ್ಸಿ-ಎಸ್ಟಿ ಒಳ ಮೀಸಲಾತಿ ಗೊಂದಲದ ಬಗ್ಗೆ ಸಂವಿಧಾನ ಪೀಠ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದೆ. ಅದನ್ನು ತೆಲಂಗಾಣ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳು ಜಾರಿ ಮಾಡಿವೆ. ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಕಾಂಗ್ರೆಸ್​ಗೆ ಹಾಗೂ ಅಲ್ಲಿನ ದಲಿತ ನಾಯಕರಿಗೆ ಅಸಕ್ತಿ ಇಲ್ಲ ಎಂದು ಆರೋಪಿಸಿದರು. ಮೀಸಲಾತಿ ಹೆಚ್ಚಳದ ಕುರಿತು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾಗಮೋಹನ್ ದಾಸ್ ವರದಿ ಬಂದಿದೆ. ನಾನು ಸಿಎಂ ಆಗಿದ್ದಾಗ ಎಸ್ಸಿ ಸಮುದಾಯಕ್ಕೆ 15%ರಿಂದ 17% ಹಾಗೂ ಎಸ್ಟಿ ಸಮುದಾಯಕ್ಕೆ 3%ರಿಂದ 7% ಮೀಸಲಾತಿ ಹೆಚ್ಚಿಗೆ ಮಾಡಿದ್ದೇನೆ. ಇದರಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸುಮಾರು ನಾಲ್ಕು ಸಾವಿರ ಎಂಜಿನಿಯರಿಂಗ್ ಹಾಗೂ ಸುಮಾರು 400 ವೈದ್ಯಕೀಯ ಸೀಟುಗಳು ಹೆಚ್ಚಿಗೆ ಲಭ್ಯವಾಗಿವೆ. ಈ ಆದೇಶ ಜಾರಿಯಾಗಿ ನಾಲ್ಕು ವರ್ಷ ಆಗಿದೆ ಎಂದು ಹೇಳಿದರು. ಹೀಗೆ  ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ, ನಾಗಮೋಹನ ದಾಸ್ ವರದಿ, ಜೆ.ಸಿ.ಮಾಧುಸ್ವಾಮಿ ಸಮಿತಿ ವರದಿ ಯಾವುದನ್ನೂ ಜಾರಿ ಮಾಡದೇ ಗೊಂದಲ ಸೃಷ್ಟಿ ಮಾಡಿದೆ. ಈಗ ಕೋರ್ಟ್​ನಲ್ಲಿ 15%ರಷ್ಟು ಮೀಸಲಾತಿ ಜಾರಿ ಮಾಡುತ್ತೇವೆ ಎಂದು ತಾವೇ ಬರೆದುಕೊಟ್ಟಿದ್ದಾರೆ.

ಆದರಿಂದ ಬೆಳಗಾವಿ ಅಧಿವೇಶನದಲ್ಲಿ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ 17% ಮತ್ತು 7% ಅಂತ ಕಾನೂನು ಮಾಡಿದ್ದಾರೆ. ಇನ್ನೊಂದೆಡೆ 15% ಮತ್ತು 3%ರಷ್ಟು ಮೀಸಲಾತಿ ಜಾರಿ ಮಾಡಿದ್ದಾರೆ. ಇದನ್ನು ದಲಿತ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಪಕ್ಷದ ನಾಯಕರು ತೀರ್ಮಾನ ಮಾಡಿದ್ದಾರೆ‌. ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಪ್ರತಿಪಕ್ಷದ ನಾಯಕರು, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎಲ್ಲರೂ ಜಾಗೃತಿ ಮೂಡಿಸಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು ಎನ್ನಲಾಗಿದೆ.