ಬಳ್ಳಾರಿ (ಮೇ 12): ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ಸರಿಸುಮಾರು 20 ಕೋಟಿ ರೂ.ಗೂ ಅಧಿಕ ತೆರಿಗೆ ಪಾವತಿಸದೆ ಜಿಂದಾಲ್ ಕಂಪನಿ ಗಪ್‌ಚುಪ್ ಕುಳಿತಿದೆ. ಹಲವು ಬಾರಿ ನೋಟಿಸ್ ನೀಡಿದರೂ ಕಂಪನಿ ಡೋಂಟ್ ಕೇರ್ ಧೋರಣೆ ತಾಳಿರುವುದು ಸ್ಥಳೀಯ ಆಡಳಿತ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಹಾಗೂ ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯತ್ಗಳಿಗೆ ಪಾವತಿಸಬೇಕಿರುವ ತೆರಿಗೆಯ ವಸೂಲಿಗೆ ನೋಟಿಸ್ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. 1994ರಲ್ಲಿ ವಿಜಯನಗರ ಸ್ಟೀಲ್ ಲಿಮಿಟೆಡ್ ಹೆಸರಲ್ಲಿ ಆರಂಭವಾದ ಜಿಂದಾಲ್, ಸಾವಿರಾರು ಎಕರೆಯಲ್ಲಿ ಕಬ್ಬಿಣ, ಸಿಮೆಂಟ್, ಪೇಂಟ್ ಸೇರಿ ಹಲವು ಉದ್ಯಮಗಳನ್ನು ನಡೆಸುತ್ತಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಹೆಗ್ಗಳಿಕೆ ಇದ್ದರೂ, ತೆರಿಗೆ ವಸೂಲಿ ಮಾಡುವುದು ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗೆ ಸವಾಲಾಗಿದ್ದು. ಜಿಂದಾಲ್ ಕಾರ್ಯವೈಖರಿ ಬಗ್ಗೆ ಸಿಎಂ ಮತ್ತು ಡಿಸಿಎಂ ಗಮನಕ್ಕೆ ತರುತ್ತೇನೆ ಎಂದ ಶಾಸಕ ಭರತ್ ರೆಡ್ಡಿ ತೀಳಿಸಿದ್ದಾರೆ ಎನ್ನಲಾಗಿದೆ
















