ಬೆಂಗಳೂರು : ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಶೇ.12.50 ರಷ್ಟು ವೇತನ ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜು.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. 2025 ಮಾರ್ಚ್ 31ರ ಮೂಲ ವೇತನದ ಮೇಲೆ 12.5% ನಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಸಾರಿಗೆ ನೌಕರರು ಹಲವು ವರ್ಷಗಳಿಂದ ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಈಗ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದೆ.
ಶೇ.25 ರಷ್ಟು ವೇತನ ಪರಿಷ್ಕರಣೆಗೆ ಸಾರಿಗೆ ಸಂಘಟನೆಗಳು ಒತ್ತಾಯಿಸಿದ್ದವು. ವೇತನ ಪರಿಷ್ಕರಣೆ ಮಾಡದಿದ್ದರೆ ಮುಷ್ಕರ ಮಾಡಲು ನಿರ್ಧರಿಸಿದ್ದವು. ಸಾರಿಗೆ ಇಲಾಖೆ ಶೇ.12.5 ರಷ್ಟು ವೇತನ ಪರಿಷ್ಕರಿಸಿದೆ. ಆದರೆ, ಇದಕ್ಕೆ ಸಾರಿಗೆ ನೌಕರರ ಸಂಘಟನೆಗಳು ಒಪ್ಪಿಗೆ ಸೂಚಿಸಿಲ್ಲ. 20 ರಂದು ಮುಷ್ಕರ ಮಾಡಲು ನಿರ್ಧಾರಿಸಿವೆ.
ನಾಲ್ಕು ನಿಗಮದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. 2024 ಜನವರಿಯಿಂದ 25% ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ. ಆದರೆ, ಸರ್ಕಾರ 2025 ಮಾರ್ಚ್ನಿಂದ 12.5% ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಂಡಿದೆ. ಸರ್ಕಾರದ ನಿರ್ಧಾರಕ್ಕೆ ಸದ್ಯ ಸಾರಿಗೆ ನೌಕರರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಮುಷ್ಕರ ನಡೆಸುವುದಾಗಿ ತಿಳಿಸಿವೆ.
















