ಮನೆ ಆರೋಗ್ಯ ಪದೇಪದೇ ಹೊಟ್ಟೆ ನೋವು, ಕಂಡುಬರುವುದು ಗಂಭೀರ ಕಾಯಿಲೆಯ ಸೂಚನೆಯೇ..!

ಪದೇಪದೇ ಹೊಟ್ಟೆ ನೋವು, ಕಂಡುಬರುವುದು ಗಂಭೀರ ಕಾಯಿಲೆಯ ಸೂಚನೆಯೇ..!

0

ಅನೇಕರು ಪದೇಪದೇ ಹೊಟ್ಟೆ ನೋವು ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ಅದು ಗಂಭೀರ ಕಾಯಿಲೆಯ ಸೂಚನೆಯಾಗಿರಬಹುದು.

ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಹೇಳುವ ಪ್ರಕಾರ, ಪದೇಪದೇ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಳ್ಳಲು ಪ್ರಮುಖ ಕಾರಣ ಅಸ್ವಸ್ಥ ಆಹಾರ ಪದ್ಧತಿಯಾಗಿದೆ. ಹಾಗಾದರೆ ಪದೇ ಪದೇ ಈ ರೀತಿಯಾಗುವುದಕ್ಕೆ ಕಾರಣವೇನು, ಯಾವ ರೀತಿ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಹೊಟ್ಟೆ ಆರೋಗ್ಯ ಕಾಪಾಡಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು.

ಯಾವ ಸಮಸ್ಯೆಗಳ ಸೂಚನೆಯಾಗಿರಬಹುದು? – ಅನೇಕರು ಮೈದಾ ಪದಾರ್ಥಗಳು, ಫಾಸ್ಟ್ ಫುಡ್ ಮತ್ತು ಎಣ್ಣೆಯ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಈ ರೀತಿಯ ಆಹಾರ ಸುಲಭವಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಗ್ಯಾಸ್ಟ್ರಿಕ್ ಮತ್ತು ಅಜೀರ್ಣ ಸಮಸ್ಯೆ ಉಂಟುಮಾಡುತ್ತದೆ. ಕೆಲವರಿಗೆ ಹಾಲು, ಗ್ಲೂಟನ್ ಅಥವಾ ಕೆಲವು ಆಹಾರ ಪದಾರ್ಥಗಳು ಕೂಡ ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆ ಉಬ್ಬುವುದು ಮತ್ತು ಸಣ್ಣ ನೋವು ಕಾಣಿಸಿಕೊಳ್ಳಬಹುದು.

ದೀರ್ಘಕಾಲ ಗ್ಯಾಸ್ಟ್ರಿಕ್, ಮಲಬದ್ಧತೆ ಅಥವಾ ಅಜೀರ್ಣ ಸಮಸ್ಯೆ ಇದ್ದರೆ ಅದು ಐಬಿಎಸ್ (ಇರಿಟೇಬಲ್ ಬವಲ್ ಸಿಂಡ್ರೋಮ್) ಅಥವಾ ಅಂತರಾಯದ ಉರಿಯೂತದ ಸೂಚನೆಯಾಗಿರಬಹುದು. ಕೆಲ ಸಂದರ್ಭಗಳಲ್ಲಿ ಹೊಟ್ಟೆ ಸಮಸ್ಯೆ ಅಲ್ಸರ್ ಅಥವಾ ಕ್ಯಾನ್ಸರ್‌ನ ಆರಂಭಿಕ ಲಕ್ಷಣವಾಗಿಯೂ ಕಾಣಿಸಬಹುದು. ಹೀಗಾಗಿ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬಾರದು ಎಂದು ತಜ್ಞರು ಎಚ್ಚರಿಸುತ್ತಾರೆ.

ಹೊಟ್ಟೆಯ ಆರೋಗ್ಯ ಕಾಪಾಡಲು ಏನು ಮಾಡಬೇಕು? – ಫಾಸ್ಟ್ ಫುಡ್ ಮತ್ತು ಎಣ್ಣೆಯಲ್ಲಿ ಕರಿದ ಆಹಾರಗಳ ಸೇವನೆ ಮಾಡುವುದನ್ನು ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ 7 ಗ್ಲಾಸ್ ನೀರು ಕುಡಿಯಬೇಕು. ಹಸಿರು ತರಕಾರಿ, ಹಣ್ಣು ಮತ್ತು ಫೈಬರ್‌ಯುಕ್ತ ಆಹಾರ ಸೇವಿಸುವುದು ಜೀರ್ಣಕ್ರಿಯೆ ಸುಧಾರಣೆಗೆ ಸಹಾಯಕ. ಪ್ರತಿದಿನ ನಿಯಮಿತ ಸಮಯಕ್ಕೆ ಊಟ ಮಾಡುವುದು, ಒತ್ತಡ ಕಡಿಮೆ ಮಾಡಿಕೊಳ್ಳುವುವು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.