ಮನೆ ಅಪರಾಧ ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿಗಳ ಬಂಧನ

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿಗಳ ಬಂಧನ

0

ಮೈಸೂರು(Mysuru): ವ್ಯಕ್ತಿಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ ೨೪ ಲಕ್ಷ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ.
ಸದರಿ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್, ಕೋವಿಡ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸದಲ್ಲಿ ಗೂಗಲ್ ನಲ್ಲಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಅವರಿಗೆ ಎಮಿನೆಂಟ್ ಮೈಂಡ್ ಎಂಬ ಕಂಪನಿಯ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿದ್ದಾರೆ. ಕಂಪನಿಯವರು ಕೆಲಸಕ್ಕೆ ನೀವು ಆಯ್ಕೆಯಾಗಿದ್ದು, ಹಣ ಕಳುಹಿಸಿದರೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ನಂಬಿಸಿ ೨೦೨೦ರ ನ.೫ ರಿಂದ ೨೦೨೨ರ ಎ.೪ ರವರೆಗೆ ೪೮,೮೦,೩೦೦ ಊ.ಗಳನ್ನು ಹಲವು ಕಂತುಗಳಲ್ಲಿ ಪಡೆದುಕೊಂಡಿದ್ದಾರೆ. ಯಾವುದೇ ಕೆಲಸ ಕೊಡಿಸದಿದ್ದಾಗ ಅನುಮಾನಗೊಂಡ ವ್ಯಕ್ತಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಏಳು ಸ್ಯಾಮ್ ಸಂಗ್ ಮೊಬೈಲು, ನಾಲ್ಕು ಸ್ಮಾರ್ಟ್‌ಫೋನ್, ೧೧ ಸಿಮ್ ಕಾರ್ಡ್, ಎರಡು ಲ್ಯಾಪ್‌ಟಾಪ್, ಮೂರು ಕಚೇರಿ ಸೀಲುಗಳು, ೨೪ ಲಕ್ಷ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.