ಮೂತ್ರಪಿಂಡ ಅಂದರೆ ಕಿಡ್ನಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಯಾವ ರೀತಿಯ ದಿನಚರಿಯನ್ನು ಅಳವಡಿಸಿಕೊಳ್ಳಬೇಕು. ನಾವು ಸೇವನೆ ಮಾಡುವ ಆಹಾರ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.
ಆಹಾರ ಸಮತೋಲಿತವಾಗಿದ್ದಲ್ಲಿ ಅದರಲ್ಲಿಯೂ ಉಪ್ಪಿನಂಶ ಕಡಿಮೆ ಇರುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದೆಲ್ಲದರ ಜೊತೆಗೆ ವೈದ್ಯರ ಅನುಮತಿ ಇಲ್ಲದೆಯೇ ಯಾವುದೇ ಮಾತ್ರೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ ಇದು ಕಿಡ್ನಿಗೆ ಹಾನಿ ಮಾಡುವ ಸಾಧ್ಯತೆ ಇರುತ್ತದೆ.
ಸಾಕಷ್ಟು ನೀರು ಕುಡಿಯಿರಿ : ಪ್ರತಿದಿನ ಕನಿಷ್ಠ ೮-೧೦ ಲೋಟ ನೀರು ಕುಡಿಯುವುದು ಕಿಡ್ನಿಯಿಂದ ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಉಪ್ಪು (ಸೋಡಿಯಂ) ಕಡಿಮೆ ಮಾಡಿ : ಪ್ರತಿದಿನ ೫-೬ ಗ್ರಾಂ ಗಿಂತ ಹೆಚ್ಚು ಉಪ್ಪು ಸೇವಿಸಬೇಡಿ. ಸಂಸ್ಕರಿಸಿದ ಆಹಾರಗಳು ಮತ್ತು ಪ್ಯಾಕ್ ಮಾಡಿದ ಆಹಾರಗಳಲ್ಲಿ ಸೋಡಿಯಂ ಹೆಚ್ಚಿರುತ್ತದೆ. ಸಮತೋಲಿತ ಆಹಾರ : ತಾಜಾ ಹಣ್ಣುಗಳು, ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ. ಸಕ್ಕರೆ ಮತ್ತು ಸಂಸ್ಕರಿಸಿದ ಆಹಾರವನ್ನು ಕಡಿಮೆ ಮಾಡಿ. ನಿಯಮಿತ ವ್ಯಾಯಾಮ : ದಿನನಿತ್ಯದ ವ್ಯಾಯಾಮವು ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕಿಡ್ನಿ ಹಾನಿಯನ್ನು ತಡೆಯುತ್ತದೆ. ತೂಕ ನಿರ್ವಹಣೆ : ಆರೋಗ್ಯಕರ ದೇಹದ ತೂಕವನ್ನು ಕಾಯ್ದುಕೊಳ್ಳಿ.
















