ದಾವಣಗೆರೆ : ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಅತಾವುಲ್ಲಾ (46) ಎಂದು ಗುರುತಿಸಲಾಗಿದೆ. ಭದ್ರಾವತಿಯ ಶೇಖ್ ದಸ್ತುಗಿರಿ, ಜಬೀವುಲ್ಲಾ ಸಹಚರರಿಂದ ಕೊಲೆ ನಡೆದಿದೆ. ಈ ಹಿಂದೆ ಇಬ್ಬರ ನಡುವೆ ಹಣದ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಈ ಕಾರಣದಿಂದಾಗಿ ದುಷ್ಕರ್ಮಿಗಳು ಶುಕ್ರವಾರ (ಮೇ 15) ತಡರಾತ್ರಿ ಏಕಾಏಕಿ ಬೈಕ್‍ನಲ್ಲಿ ಬಂದು ದಾಳಿ ನಡೆಸಿ, ಕತ್ತಿ ಹಾಗೂ ಮಚ್ಚುಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ. ಚನ್ನಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
















