ಮನೆ ರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು..!

ಅಕ್ರಮ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು..!

0

ನವದೆಹಲಿ : ಭೂ ವ್ಯವಹಾರದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 50,000 ರೂ.ಗಳ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಲಾಗಿದೆ.

ಹರಿಯಾಣದ ಗುರು ಗ್ರಾಮ್‌ನಲ್ಲಿ ಕಡಿಮೆ ಬೆಲೆಗೆ 3.53 ಎಕರೆ ಭೂಮಿ ಖರೀದಿಸಿ, ಅತಿ ಹೆಚ್ಚು ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ಅವರ ಮೇಲಿದೆ. ಫೆಬ್ರವರಿ 2008 ರಲ್ಲಿ ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ್‌ನ ಸೆಕ್ಟರ್ 83, ಶಿಕೊಪುರ, ಸಿಕಂದರ್‌ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ 7.5 ಕೋಟಿ ರೂ.ಗೆ ಭೂಮಿ ಖರೀದಿಸಿ, 55 ಕೋಟಿ ರೂ.ಗೆ ಮಾರಾಟ ಮಾಡಿದೆ ಎಂಬ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ರಾಬರ್ಟ್ ವಾದ್ರಾ ಅವರನ್ನು ಸಹ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 58 ಕೋಟಿ ರೂ.ಗಳನ್ನು ಅಕ್ರಮ ಆದಾಯವೆಂದು ಇ.ಡಿ ಗುರುತಿಸಿದೆ. ವಾದ್ರಾ ಮತ್ತು ಅವರ ಸಂಬಂಧಿತ ಸಂಸ್ಥೆಗಳ 38.69 ಕೋಟಿ ರೂ. ಮೌಲ್ಯದ 43 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.‌ ನ್ಯಾಯಾಲಯ ಯಾವುದೇ ಹೆಚ್ಚುವರಿ ಷರತ್ತುಗಳನ್ನು ವಿಧಿಸದೆ ಕೇವಲ ಜಾಮೀನು ಬಾಂಡ್‌ಗಳನ್ನು ಸಲ್ಲಿಸಲು ಸೂಚಿಸಿ ವಾದ್ರಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ಪ್ರಕರಣದ ಹೆಚ್ಚಿನ ವಿಚಾರಣೆ ಜುಲೈ 10 ರಂದು ನಡೆಸಲು ನ್ಯಾಯಾಲಯ ಪಟ್ಟಿ ಮಾಡಿದೆ.