ಮನೆ ರಾಜಕೀಯ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುತ್ತೇವೆ: ಸಿಎಂ ಬೊಮ್ಮಾಯಿ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುತ್ತೇವೆ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ೧೩೨ ಕೋಟಿ ರೂ. ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.
ಭಿಕ್ಷೆ ಬೇಡಿದ ಹಣ ಎಲ್ಲಿ?: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಬಿಕ್ಷೆ ಬೇಡಿಯಾದರೂ ಯೂನಿಫಾರ್ಮ್ ಶೂ ಕೊಡುತ್ತೇವೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು. ಆ ಹಣ ಎಲ್ಲಿ? ಎಂದು ಪ್ರಶ್ನಿಸಿದರು.