ಮನೆ ಸುದ್ದಿ ಜಾಲ ಸುಪ್ರೀಂ ಕೋರ್ಟ್​​ : ಬೀದಿ ನಾಯಿಗಳ ಸ್ಥಳಾಂತರ ಮಾಡುವಂತೆ ಸಲ್ಲಿಸಲಾದ ಅರ್ಜಿ ವಜಾ

ಸುಪ್ರೀಂ ಕೋರ್ಟ್​​ : ಬೀದಿ ನಾಯಿಗಳ ಸ್ಥಳಾಂತರ ಮಾಡುವಂತೆ ಸಲ್ಲಿಸಲಾದ ಅರ್ಜಿ ವಜಾ

0

ನವದೆಹಲಿ: ಬೀದಿ ನಾಯಿಗಳ ಸ್ಥಳಾಂತರ ಮತ್ತು ಸಂತಾನಹರಣ ಚಿಕಿತ್ಸೆ ಕುರಿತು ಸುಪ್ರೀಂ ಕೋರ್ಟ್ ಕಳೆದ 2025ರ ನವೆಂಬರ್ 7ರ ಆದೇಶವನ್ನು ಮರುಪಡೆಯಲು ಮತ್ತು ಮಾರ್ಪಾಡು ಮಾಡುವಂತೆ ಕೋರಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ಈ ಮೂಲಕ ಬೀದಿ ನಾಯಿಗಳ ತೆರವಿಗೆ ಆದೇಶಿಸಿದೆ. ಶಾಲೆಗಳು, ಆಸ್ಪತ್ರೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾಂಸ್ಥಿಕ ಪ್ರದೇಶಗಳಿಂದ ಎಲ್ಲಾ ಬೀದಿ ನಾಯಿಗಳನ್ನು ಸ್ಥಳಾಂತರ ಆದೇಶವನ್ನು ಮಾರ್ಪಡಿಸಲು ಸಾಧ್ಯವಿಲ್ಲ. ನಾಯಿ ಕಡಿತದ ಘಟನೆಗಳು ನಾಗರಿಕ ಜೀವನಕ್ಕೆ ಅಪಾಯವನ್ನುಂಟು ಮಾಡಬಹುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ ಎನ್ನಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಬೇಕು ಎಂದು ನವೆಂಬರ್ 2025ರಲ್ಲಿ ನೀಡಿದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತು. ಬೀದಿ ನಾಯಿಗಳನ್ನು ಮತ್ತೆ ಹಳೆಯ ಪ್ರದೇಶ್ಕೆ ಬಿಡಬಾರದು ಎಂಬ ನಿರ್ದೇಶನವು ಹಾಗೆಯೇ ಉಳಿಸಿಕೊಂಡಿದೆ. ದೇಶಾದ್ಯಂತ ಬೀದಿ ನಾಯಿ ಕಡಿತದ ಘಟನೆಗಳ ಕುರಿತು ದತ್ತಾಂಶವನ್ನು ಉಲ್ಲೇಖಿಸಿದ ಪೀಠ, ಈ ರೀತಿ ಘಟನೆಗಳು ಜನರು ಮತ್ತು ಸ್ಥಳೀಯ ಅಧಿಕಾರಿಗಳಲ್ಲಿ ಕಳವಳವನ್ನು ಹೆಚ್ಚಿಸಿದೆ. ಇವು ನಾಗರಿಕ ಆಡಳಿತ ಮತ್ತು ನಗರ ಆಡಳಿತದ ಮೇಲಿನ ಸಾರ್ವಜನಿಕ ವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ. ನಾಯಿ ಕಡಿತದ ಪ್ರಕರಣಗಳ ಅಂಕಿ – ಅಂಶಗಳು ದಿಗ್ಭ್ರಮೆಗೊಳಿಸುತ್ತದೆ. ಇವು ಗಂಭೀರ ಮಾನವ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯ ಪರಿಣಾಮಗಳನ್ನು ಹೊಂದಿದೆ ಎಂದರು. ಹಾಗೆ ಸಂವಿಧಾನದ 21ನೇ ವಿಧಿಯ ಅಡಿ ಘನತೆಯಿಂದ ಬದುಕುವ ಹಕ್ಕನ್ನು ಪ್ರತಿಯೊಬ್ಬರಿಗೂ ನೀಡಲಾಗಿದೆ.

ಆದರೆ, ಸಾರ್ವಜನಿಕ ಪ್ರದೇಶಗಳಲ್ಲಿ ನಾಯಿ ಕಡಿತದಂತಹ ಜೀವಕ್ಕೆ ಅಪಾಯಕಾರಿ ಘಟನೆ ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತವಾಗಿ ಚಲಿಸುವ ಹಕ್ಕಿಗೆ ಬೆದರಿಕೆ ಹಾಕುತ್ತದೆ ಎಂದು ಪೀಠ ತಿಳಿಸಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿದೆ. ರಾಜ್ಯಗಳುಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಗಳನ್ನು ಜಾರಿಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ ಎಂದು ತಿಳಿದುಬಂದಿದೆ.