ಮನೆ ಉದ್ಯೋಗ ಐಡಿಬಿಐ ಬ್ಯಾಂಕ್ : ೨೨೬ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕ್ : ೨೨೬ ಹುದ್ದೆಗಳಿಗೆ ನೇಮಕಾತಿ

0

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ೨೨೬ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಜುಲೈ ೧೦ ಆಗಿದೆ.
ಸ್ಪೇಷಲ್ ಕೇಡರ್ ಅಡಿಯಲ್ಲಿ ಐಡಿಬಿಐ ಬ್ಯಾಂಕ್ ಈ ನೇಮಕಾತಿಗೆ ಮುಂದಾಗಿದೆ. ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಕೆಳಗಿನಂತಿದೆ.
ಬ್ಯಾಂಕ್ ಹೆಸರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI ಬ್ಯಾಂಕ್)
ಹುದ್ದೆಯ ಹೆಸರು: ಮ್ಯಾನೇಜರ್, ಸಹಾಯಕ ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: ೨೨೬
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: ೪೮೧೭೦-೮೯೮೯೦ ರೂ ಪ್ರತಿ ತಿಂಗಳು
ಹುದ್ದೆ: ಮ್ಯಾನೇಜರ್(ಗ್ರೇಡ್ ಬಿ), ಸಹಾಯಕ ಜನರಲ್ ಮ್ಯಾನೇಜರ್ (ಗ್ರೇಡ್ ಸಿ), ಡೆಪ್ಯುಟಿ ಜನರಲ್ ಮ್ಯಾನೇಜರ್ (ಗ್ರೇಡ್ ಡಿ)
ಹುದ್ದೆ ಸಂಖ್ಯೆ: ೮೨, ೧೧೧, ೩೩
ವಿದ್ಯಾರ್ಹತೆ: ಯಾವುದೇ ವಿಯಷದಲ್ಲಿ ಪದವಿ, ಬಿಇ, ಬಿಟೆಕ್, ಪದವಿ
ವಯೋಮಿತಿ: ೨೫-೩೫ ವರ್ಷ, ೨೮-೪೦ ವರ್ಷ, ೩೫-೪೫ ವರ್ಷ
ವಯೋಮಿತಿ ಸಡಿಲಿಕೆ: ಪ.ಜಾ, ಪ.ಪಂ, ಮಾಜಿ ಸೈನಿಕ ಅಭ್ಯರ್ಥಿಗಳು: ೦೫ ವರ್ಷಗಳು
ಒಬಿಸಿ ಅಭ್ಯರ್ಥಿಗಳು: ೦೩ ವರ್ಷಗಳು
ವಿಕಲಚೇತನಅಭ್ಯರ್ಥಿಗಳು: ೧೦ ವರ್ಷಗಳು
ಅರ್ಜಿ ಶುಲ್ಕ: ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು: ೨೦೦ ರೂ, ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು: ೧೦೦೦ ರೂ
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಅನುಭವ, ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ೨೫ ಜೂನ್ ೨೦೨೨
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ೧೦ ಜುಲೈ ೨೦೨೨
ಆನ್‌ಲೈನ್‌ನಲ್ಲಿ ೨೫ ಜೂನ್ ೨೦೨೨ ರಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅಧಿಕೃತ ವೆಬ್‌ಸೈಟ್: idbibank.in
ಅರ್ಜಿ ಸಲ್ಲಿಕೆ ವಿಧಾನ: -ಅಧಿಸೂಚನೆ ೨೦೨೨ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ