ಬೆಂಗಳೂರು : ನಗರದ ಮಡಿವಾಳ ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಯುವತಿ ಕಾಲೇಜಿನಲ್ಲಿ ಓದುತ್ತಿದ್ದು, ಜೊತೆಗೆ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಗೋಶ್ ಮತ್ತು ಅತುಲ್ ಎಂಬವರ ಪರಿಚಯವಾಗಿತ್ತು.
ಮೂವರು ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಗೋಶ್ ಮತ್ತು ಅತುಲ್ ಊಟ ತರಲು ಹೋಗಿದ್ದ ವೇಳೆ, ಹೈನಾಸ್ ಎಂಬ ಮತ್ತೊಬ್ಬ ವ್ಯಕ್ತಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.















