ಮನೆ ರಾಷ್ಟ್ರೀಯ ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು..!

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು..!

0

ಲಕ್ನೋ : ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ ಎಂಬ ಮಾಹಿತ ಲಭ್ಯವಾಗಿದೆ.

ಅನು ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಬುಧವಾರ 9:30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಾಸ್ಟೆಲ್ ಕೆಲಸದಾಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡು ತಕ್ಷಣವೇ ಇತರೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಮಾಹಿತಿ ನೀಡಲಾಯಿತು.

ಟೆರೇಸ್ ಮೇಲಿಂದ ಬಿದ್ದ ಪರಿಣಾಮ ಅನು ಗುಪ್ತಾ ತಲೆಗೆ ತೀವ್ರ ಗಾಯಗಳಾಗಿದ್ದು, ಮುಖ ಸಂಪೂರ್ಣವಾಗಿ ರಕ್ತಮಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನು ಗುಪ್ತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆಕಸ್ಮಿಕವಾಗಿ ಟೆರೇಸ್ ಮೇಲಿಂದ ಬಿದ್ದಿದ್ದಾಳೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆಯಲ್ಲಿ ಗೊತ್ತಾಗಬೇಕಿದೆ.

ಸಸ್ಯ ಪೊಲೀಸರು ಹಾಸ್ಟೆಲ್ ನಿವಾಸಿಗಳು ಮತ್ತು ವಿಶ್ವವಿದ್ಯಾಲಯ ಸಿಬ್ಬಂದಿಯನ್ನು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಹಾಸ್ಟೆಲ್ ಆವರಣದಾದ್ಯಂತ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಡೆಸಲು ಎರಡು ತಂಡಗಳನ್ನು ರಚಿಸಲಾಗಿದೆ. ಎಂದು ಮೀರತ್ ಎಸ್ಪಿ (ಗ್ರಾಮೀಣ) ಅಭಿಜಿತ್ ಕುಮಾರ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.