ಮಂಡ್ಯ(Mandya): ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜಿಲ್ಲೆಯ ಹೆಸರಾಂತ ಜಲಾಶಯ ಕೆಆರ್’ಎಸ್ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಇನ್ನೂ ೩ ಅಡಿ ಮಾತ್ರ ಬಾಕಿ ಇದೆ.
ಕೆಆರ್ ಎಸ್ ಜಲಾಶಯದಲ್ಲಿ ೪೪.೮೭೩ ಟಿಎಂಸಿ ನೀರು ಸಂಗ್ರಹವಾಗಿದ್ದು, ಮೂರು ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಆದ್ದರಿಂದ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
ರಾಜ್ಯದಲ್ಲಿನ ಹಲವು ಡ್ಯಾಂಗಳು ಭರ್ತಿಯತ್ತ ಸಾಗಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕೊಡಗಿನಲ್ಲೂ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡಕುಸಿತ ಉಂಟಾಗಿದೆ.