ನವದೆಹಲಿ : NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಜ್ಞರಾಗಿ ನೇಮಕಗೊಂಡಿದ್ದರು.
ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು ಹಂಚಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.
ಹವಾಲ್ದಾರ್ ಹಂಚಿಕೊಂಡ ಪ್ರಶ್ನೆಗಳು 2026 ರ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ಬಂದಿದ್ದ ಭೌತಶಾಸ್ತ್ರದ ಪ್ರಶ್ನೆಗಳಿಗೆ ಹೊಂದಿಕೆಯಾಗುತ್ತವೆ. ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಇವರ ಪಾತ್ರ ನಿರ್ಣಾಯಕವಾಗಿ ಕಂಡುಬಂದಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೇ 16 ರಂದು ಪುಣೆಯ ಸಸ್ಯಶಾಸ್ತ್ರ ಶಿಕ್ಷಕಿ ಮಾಂಧರೆಯನ್ನು ಬಂಧಿಸಿದೆ. ಹವಾಲ್ದಾರ್ ಆಕಾಂಕ್ಷಿಗಳೊಂದಿಗೆ ಹಂಚಿಕೊಂಡ ಪ್ರಶ್ನೆಗಳು 2026 ರ ನೀಟ್ ಯುಜಿ ಪರೀಕ್ಷೆಯ ಭೌತಶಾಸ್ತ್ರ ಪತ್ರಿಕೆಯೊಂದಿಗೆ ತಾಳೆಯಾಗಿದೆ.


















