ಬೆಂಗಳೂರು : ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ನಡೆದಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ಅದೃಷ್ಟವಶಾತ್ ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೆಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

















