ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅವರು ಇಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜನತಾ ದಳ ಸೆಕ್ಯುಲರ್ (JDS) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜ ನೀಡಿ ಜಾಹ್ನವಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಜೆಡಿಎಸ್ ಪಕ್ಷ ಸೇರಿರುವ ಜಾಹ್ನವಿ ಅವರು ಈ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿದ್ದಾರೆ. ಟಿವಿ ಶೋ, ರಿಯಾಲಿಟಿ ಶೋ ಹಾಗೂ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿದ್ದ ಜಾಹ್ನವಿ ಇದೀಗ ರಾಜಕೀಯ ಕ್ಷೇತ್ರದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.


















