ಮನೆ ರಾಷ್ಟ್ರೀಯ ದೇಶದಲ್ಲಿ 18,257 ಕೋವಿಡ್ ಪಾಸಿಟಿವ್‌

ದೇಶದಲ್ಲಿ 18,257 ಕೋವಿಡ್ ಪಾಸಿಟಿವ್‌

0

ನವದೆಹಲಿ (New Delhi): ದೇಶದಾದ್ಯಂತ ಇಂದು ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 18,257 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 14,553 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಈವರೆಗೆ 4,36,22,651 ಮಂದಿಗೆ ಸೋಂಕು ತಗುಲಿದೆ. ಈ ಅವಧಿಯಲ್ಲಿ 42 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 5,25,428 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,28,690ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲಿ (3,662) ಹೆಚ್ಚಳ ಕಂಡುಬಂದಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ 4.22 ಆಗಿದೆ. ಹಾಗೆಯೇ 198.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.