ಮನೆ ಸುದ್ದಿ ಜಾಲ ಮನೆಯಲ್ಲಿ ಎಸಿ ಸ್ಫೋಟ ದುರಂತ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ನಿಧನ

ಮನೆಯಲ್ಲಿ ಎಸಿ ಸ್ಫೋಟ ದುರಂತ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ನಿಧನ

0

ದೆಹಲಿ: ನಿವಾಸದಲ್ಲೇ ಎಸಿ ಸ್ಫೋಟಗೊಂಡ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ದೆಹಲಿಯ ಹೌಜ್ಖಾಸ್ ಪ್ರದೇಶದಲ್ಲಿರುವ ಧನೇಂದ್ರ ಕುಮಾರ್ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಗುರುವಾರ ರಾತ್ರಿ ಸುಮಾರು 11:18 ಕ್ಕೆ ಘಟನೆ ನಡೆದಿದೆ. ಆ ಸಮಯದಲ್ಲಿ ಕುಟುಂಬ ಸದಸ್ಯರು ಹಾಗೂ ಗೃಹಸಹಾಯಕರನ್ನು ಸೇರಿಸಿ ಒಟ್ಟು ಐದು ಮಂದಿ ಮನೆಯಲ್ಲಿ ಇದ್ದರು.ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧನೇಂದ್ರ ಕುಮಾರ್ ಹಾಗೂ ಅವರ ಪುತ್ರರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತೀವ್ರ ಗಾಯಗಳಿಂದಾಗಿ ಧನೇಂದ್ರ ಕುಮಾರ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.ಅವರ ಪುತ್ರ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.