ಮನೆ ಸುದ್ದಿ ಜಾಲ ದ್ವಿಚಕ್ರ ವಾಹನ ಸವಾರರ ಮೇಲೆ ಬಿದ್ದ ವಿದ್ಯುತ್‌ ಕಂಬ: ಇಬ್ಬರಿಗೆ ಗಾಯ

ದ್ವಿಚಕ್ರ ವಾಹನ ಸವಾರರ ಮೇಲೆ ಬಿದ್ದ ವಿದ್ಯುತ್‌ ಕಂಬ: ಇಬ್ಬರಿಗೆ ಗಾಯ

0

ಮೈಸೂರು (Mysuru): ದ್ವಿಚಕ್ರ ವಾಹನ ಸವಾರರ ಮೇಲೆ ವಿದ್ಯುತ್‌ ಕಂಬ ಏಕಾಏಕಿ ಬಿದ್ದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಬೆಳಗನಹಳ್ಳಿ ಬಳಿ ನಡೆದಿದೆ.

ಧನಂಜಯ್‌, ಟಿಪ್ಪು ಗಾಯಗೊಂಡವರು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ಏಕಾಏಕಿ ವಿದ್ಯುತ್‌ ಕಂಬ ಬಿದ್ದಿದೆ. ಅದೃಷ್ಟವಶಾತ್‌ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.