ಮನೆ ಸುದ್ದಿ ಜಾಲ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಸಿಎಲ್​ಪಿ   ಸಭೆಯಲ್ಲಿ ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಸಿಎಲ್​ಪಿ   ಸಭೆಯಲ್ಲಿ ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ

0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಸಿಎಲ್​ಪಿ  ಸಭೆಯಲ್ಲಿ ಡಿ.ಕೆ. ಶಿವಕುಮಾರ್  ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಈ ಪ್ರಸ್ತಾವನೆಗೆ ಡಾ. ಜಿ ಪರಮೇಶ್ವರ್ ಅನುಮೋದನೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹಾಗೂ ಮುಂದಿನ ಮುಖ್ಯಮಂತ್ರಿ ಹೆಸರನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ. ಮುಂದಿನ ಸಿಎಂ ಯಾರು ಎಂಬುದನ್ನು ಹೈಕಮಾಂಡ್ ಅಂತಿಮವಾಗಿ ಘೋಷಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ನಡುವೆ, ಸಿದ್ದರಾಮಯ್ಯ ಅವರು ಎಐಸಿಸಿ ನಾಯಕ ಸುರ್ಜೇವಾಲಾ ಅವರನ್ನು ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಕೊನೆ ಕ್ಷಣದ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲವನ್ನು ಹುಟ್ಟುಹಾಕಿವೆ.