ಮನೆ ಸುದ್ದಿ ಜಾಲ 15 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

15 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

0

ಬೆಂಗಳೂರು: 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಾಜಿನಗರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಎಇಇ ಬಿ.ಎಸ್. ಶಿವಲಿಂಗಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಎಲೆಕ್ಟ್ರಿಕ್ ಸಿಟಿ ದಂಡದ ಮೊತ್ತವನ್ನು ಕಡಿಮೆ ಮಾಡಲು ಆರೋಪಿತ ಎಇಇ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಅಂಬರೀಷ್ ಎಂಬ ವ್ಯಕ್ತಿಗೆ 18 ಲಕ್ಷ ರೂ. ದಂಡ ವಿಧಿಸಲಾಗಿದ್ದು, ದಂಡದ ಮೊತ್ತವನ್ನು ಕಡಿಮೆ ಮಾಡುವುದಾಗಿ ಹೇಳಿ 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಡಿಎಸ್ಪಿ ನಾಗೇಶ್ ಹಸ್ಲರ್ ಹಾಗೂ ಡಿಎಸ್ಪಿ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಸ್ತುತ ಆರೋಪಿಯನ್ನು ಬಂಧಿಸಿ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.