ಮನೆ ಸುದ್ದಿ ಜಾಲ ಬೆಂಗಳೂರು : SIR ಹೆಲ್ಪ್ ಡೆಸ್ಕ್ ಸ್ಥಾಪಿಸಲು ಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು : SIR ಹೆಲ್ಪ್ ಡೆಸ್ಕ್ ಸ್ಥಾಪಿಸಲು ಸಿಎಂ ಡಿಕೆ ಶಿವಕುಮಾರ್ ಸೂಚನೆ

0

ಬೆಂಗಳೂರು (ಜೂನ್ 4) : ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯು ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯದೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಮತ್ತು ಎಲ್ಲಾ ಮತದಾರರಲ್ಲಿ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಆದೇಶಿಸಿದ್ದಾರೆ. ಬೇರೆ ಅನೇಕ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಜನರು ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಆದರೆ ಕೇರಳದಲ್ಲಿ ಈ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂಬುದ್ದಾಗಿದೆ.

ಹಾಗೂ ನಮ್ಮ ರಾಜ್ಯದಲ್ಲೂ ಯಾರೊಬ್ಬರ ಹೆಸರೂ ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸಲು ಸೂಚಿಸಿ, ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಇಲಾಖೆಯನ್ನು ಸೃಷ್ಟಿಸಬೇಕು. ಅದಕ್ಕೆ ಸಚಿವರೊಬ್ಬರನ್ನು ನೇಮಿಸಬೇಕು ಎಂದಿದ್ದಾರೆ. ಇದರಿಂದ ಎಸ್‌ಐಆರ್ ಎಂದರೆ ‘ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳು, ಮರಣ ಹೊಂದಿದವರ ವಿವರಗಳು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಇರುವ ಹೆಸರುಗಳನ್ನು ತೆಗೆದುಹಾಕಲು ಈ ತಾಂತ್ರಿಕ ಪ್ರಕ್ರಿಯೆಯನ್ನು ನಡೆಸುತ್ತದೆ ಎನ್ನಲಾಗಿದೆ.

ಆದರಿಂದ ಕಾಂಗ್ರೆಸ್ ಪಕ್ಷವು ಎಸ್‌ಐಆರ್ ಪ್ರಕ್ರಿಯೆಯ ಕೆಲವು ನಿಯಮಾವಳಿಗಳನ್ನು ಮೊದಲಿನಿಂದಲೂ ಆಕ್ಷೇಪಿಸುತ್ತಾ ಬಂದಿದೆ. ಈ ತಾಂತ್ರಿಕ ಪರಿಷ್ಕರಣೆಯ ಹೆಸರಿನಲ್ಲಿ ಬಡವರು, ವಲಸೆ ಕಾರ್ಮಿಕರು ಹಾಗೂ ನಿರ್ದಿಷ್ಟ ಸಮುದಾಯಗಳ ಮತಗಳನ್ನು ವ್ಯವಸ್ಥಿತವಾಗಿ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬುದು ಕಾಂಗ್ರೆಸ್‌ನ ಗಂಭೀರ ಆರೋಪವಾಗಿದೆ. ತಳಮಟ್ಟದ ಪರಿಶೀಲನೆ ಸರಿಯಾಗಿ ನಡೆಯದಿದ್ದರೆ ನಿಜವಾದ ಮತದಾರರು ಹಕ್ಕು ಕಳೆದುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಈ ಪ್ರಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.