ಮನೆ ಸುದ್ದಿ ಜಾಲ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿಯಿಂದ ವಿಶೇಷ ವಿಶ್; ಹೊಸ ಸಿನಿಮಾ ಬಗ್ಗೆ ಕೊಟ್ಟರು ಸುಳಿವು!

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿಯಿಂದ ವಿಶೇಷ ವಿಶ್; ಹೊಸ ಸಿನಿಮಾ ಬಗ್ಗೆ ಕೊಟ್ಟರು ಸುಳಿವು!

0

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ.

ಕಳೆದ ಕೆಲವು ದಿನಗಳಿಂದ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ನಡುವಿನ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಆದರೆ ರಕ್ಷಿತ್ ಹುಟ್ಟುಹಬ್ಬದಂದು ರಿಷಬ್ ಹಂಚಿಕೊಂಡಿರುವ ಪೋಸ್ಟ್ ಆ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ.

ವೈರಲ್ ಆದ ರಿಷಬ್ ಪೋಸ್ಟ್

ರಿಷಬ್ ಶೆಟ್ಟಿ ಅವರು ‘ಕಿರಿಕ್ ಪಾರ್ಟಿ’ ಚಿತ್ರದ ಚಿತ್ರೀಕರಣದ ವೇಳೆ ತೆಗೆದ ಹಳೆಯ ಫೋಟೋವೊಂದನ್ನು ಹಂಚಿಕೊಂಡು,
ಬಂದು ಹೋಗುವ ಜನರ ಮಧ್ಯೆ ಗೆಳೆಯ ಶಾಶ್ವತ ಅಧ್ಯಾಯವಾಗಿದ್ದಾನೆ. ಹ್ಯಾಪಿ ಬರ್ತ್‌ಡೇ ಮಗ ರಕ್ಷಿತ್ ಶೆಟ್ಟಿ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಬ್ಬರ ಸ್ನೇಹದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಅಭಿಮಾನಿಗಳು ಪೂರ್ಣವಿರಾಮ ಹಾಕಿದ್ದಾರೆ.

ಹೊಸ ಸಿನಿಮಾ ಬಗ್ಗೆ ರಿಷಬ್ ಸುಳಿವು

ರಕ್ಷಿತ್ ಶೆಟ್ಟಿ ಅವರ ಮುಂದಿನ ಸಿನಿಮಾ ಕುರಿತು ಸಾಕಷ್ಟು ದಿನಗಳಿಂದ ಯಾವುದೇ ಅಧಿಕೃತ ಅಪ್‌ಡೇಟ್ ಸಿಕ್ಕಿರಲಿಲ್ಲ. ಅಭಿಮಾನಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ,
ಮೊನ್ನೆ ತಾನೇ ಭೇಟಿ ಮಾಡಿ ಬಂದೆ. ಅವನು ಸದ್ಯದಲ್ಲೇ ಮರಳಿ ಬರಲಿದ್ದಾನೆ” ಎಂದು ಬರೆದುಕೊಂಡಿದ್ದಾರೆ.

ರಿಷಬ್ ಅವರ ಈ ಹೇಳಿಕೆ ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ಶೀಘ್ರದಲ್ಲೇ ಅವರ ಮುಂದಿನ ಚಿತ್ರದ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂಬ ಚರ್ಚೆ ಜೋರಾಗಿದೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳು ಇಬ್ಬರು ಕಲಾವಿದರ ಸ್ನೇಹವನ್ನು ಕೊಂಡಾಡುತ್ತಿದ್ದಾರೆ.