ಮೈಸೂರು: ನಗರದಲ್ಲಿನ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಹೋದ ಮೊಬೈಲ್ ಫೋನ್ಗಳ ಕುರಿತು ನೀಡಿದ್ದ ದೂರುಗಳ ಮೇರೆಗೆ ಪೊಲೀಸರು ತ್ವರಿತ ಕ್ರಮ ಕೈಗೊಂಡು, CEIR (Central Equipment Identity Register) ಪೋರ್ಟಲ್ ಸಹಾಯದಿಂದ ಮೊಬೈಲ್ಗಳನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ.

ಈ ಕುರಿತು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ವಿಶೇಷ ಕಾರ್ಯಾಚರಣೆ ನಡೆಸಿ, ಕಳೆದುಹೋದ ಮೊಬೈಲ್ಗಳ ವಿವರಗಳನ್ನು CEIR ಪೋರ್ಟಲ್ನಲ್ಲಿ ಪರಿಶೀಲಿಸಿ ಅವುಗಳ ಸುಳಿವು ಪತ್ತೆಹಚ್ಚಿದರು. ಬಳಿಕ ಮೊಬೈಲ್ಗಳನ್ನು ವಶಪಡಿಸಿಕೊಂಡು, ಅಗತ್ಯ ದಾಖಲೆಗಳ ಪರಿಶೀಲನೆಯ ನಂತರ ಅವುಗಳನ್ನು ಸಂಬಂಧಪಟ್ಟ ವಾರಸುದಾರರ ವಶಕ್ಕೆ ಹಸ್ತಾಂತರಿಸಿದರು.

ಹಾಗೂ ಮೊಬೈಲ್ ಕಳೆದುಹೋದ ಸಂದರ್ಭದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವುದು ಹಾಗೂ CEIR ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ಇದರಿಂದ ಕಳೆದುಹೋದ ಮೊಬೈಲ್ಗಳನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಆಸ್ತಿಯನ್ನು ಸುರಕ್ಷಿತವಾಗಿ ಮರಳಿ ಒದಗಿಸುವಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎನ್ನಲಾಗುತ್ತಿದೆ.














