ಜಲ್ಗಾಂವ್ (ಮಹಾರಾಷ್ಟ್ರ): ಮೂರು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಜಲ್ಗಾಂವ್ನಲ್ಲಿ ಸಂಭವಿಸಿದ್ದು ಇಂದು ಬೆಳಗ್ಗೆ ಈ ಭೀಕರ ಅಪಘಾತ ನಡೆದಿದೆ. ಬೆಳಗ್ಗೆ 7ಗಂಟೆ ಸುಮಾರಿಗೆ ಜಲ್ಗಾಂವ್ನ ಅಮಲ್ನೇರ್-ಧುಲೆ ರಸ್ತೆಯ ಬಳಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್, ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಡಿಕ್ಕಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಧುಲೆಯಿಂದ ಅಮಲ್ನೇರ್ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎಸ್‌ಟಿ ಬಸ್ ಮತ್ತು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಇದರ ಕುರಿತು ಗುಜರಾತ್‌ನ ಮಹಾಜನ್ ಕುಟುಂಬ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಲು ಕುಟುಂಬವೊಂದು ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಕುಟುಂಬದ ಐವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು, ಧರಂಗಾವ್ ನಿವಾಸಿಯ ಸವಾರ ಸಾವನ್ನಪ್ಪಿದ್ದಾನೆ. ಜೊತೆಗೆ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳೀಯರು ಮತ್ತು ಪೊಲೀಸರ ರಕ್ಷಣಾ ಪ್ರಯತ್ನ ನಡೆಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ಧಾರೆ.

ಹಾಗೂ ಕಾರಿನೊಳಗೆ ಒಬ್ಬ ಬಾಲಕ ಸಿಲುಕಿಕೊಂಡಿದ್ದು, ಸ್ಥಳೀಯ ಗ್ರಾಮಸ್ಥರು, ಪೊಲೀಸರು ಮತ್ತು ಬಸ್ ಸಿಬ್ಬಂದಿಯ ಸಹಾಯದಿಂದ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕ ದೀಪಕ್ ದಿಲೀಪ್ ಪಾಟೀಲ್ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
















