ದೇವನಹಳ್ಳಿ (ಜೂನ್ 10) : ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್ನ 899.50 ಗ್ರಾಂ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಆರೋಪಿಯ ಕಳ್ಳಾಟವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಹಾಗೂ ಇನ್ನು ಚಿನ್ನದ ಸಾಗಾಟಕ್ಕೆ ಆರೋಪಿ ಸಖತ್ ಪ್ಲ್ಯಾನ್ ಮಾಡಿದ್ದ. ನಾಲ್ಕು ಕ್ಯಾಪ್ಸುಲ್ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಸಾಗಟಕ್ಕೆ ಯತ್ನಿಸಿದ್ದ. ಆದರೆ ಅನುಮಾನಾಸ್ಪದ ವರ್ತನೆ ಹಿನ್ನೆಲೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಹಿರಂಗಗೊಂಡಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂಬುದ್ದಾಗಿದೆ.















