ದೆಹಲಿ/ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ದೆಹಲಿಗೆ ತೆರಳಿದ್ದ ತುಮಕೂರು ಜಿಲ್ಲೆಯ ತಿಪಟೂರಿನ ಹಿರಿಯ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರು ಅನಾರೋಗ್ಯದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಾಸಕ ಷಡಕ್ಷರಿ ಅವರ ಆರೋಗ್ಯದಲ್ಲಿ ಗುರುವಾರ ಏರುಪೇರಾಗಿದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.

ಈದರ ಕುರಿತು ಶಾಸಕ ಷಡಕ್ಷರಿ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ತೊಂದರೆ ಕಾಣಿಸಿಕೊಂಡಾಗ ದೆಹಲಿ ಕರ್ನಾಟಕ ಭವನದಲ್ಲಿಯೇ ಇದ್ದ ತುಮಕೂರು ಜಿಲ್ಲೆಯವರೇ ಆದ ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ್ ಮತ್ತು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕೆತ್ಸೆ ಕೊಡಿಸಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಶಾಸಕ ಷಡಕ್ಷರಿ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಿದಾಗ ಸಕಾಲಕ್ಕೆ ಚಿಕಿತ್ಸೆ ದೊರೆತಿದೆ. ಷಡಕ್ಷರಿ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಚೇತರಿಸಿಕೊಳ್ಳತೊಡಗಿದ್ದಾರೆ.

ಆದರಿಂದ ಆತಂಕ ಪಡುವ ಅವಶ್ಯಕತೆಯಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾಸಕ ಕೆ. ಷಡಕ್ಷರಿ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿರುವ ವಿಷಯ ತಿಳಿದು ದೆಹಲಿಯಲ್ಲಿಯೇ ಇದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ತೆರಳಿ ಶಾಸಕ ಷಡಕ್ಷರಿ ಅವರ ಆರೋಗ್ಯ ವಿಚಾರಿಸಿ ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದರು ಎಂದು ತಿಳಿದಬಂದಿದೆ.
















