ಮನೆ ಸುದ್ದಿ ಜಾಲ ದೆಹಲಿ : ಬಹು ಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ ,  ಮೂವರು ಸಾವು

ದೆಹಲಿ : ಬಹು ಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ ,  ಮೂವರು ಸಾವು

0

ನವದೆಹಲಿ: ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ದೆಹಲಿಯ ತುಘಲಕಾಬಾದ್ ಪ್ರದೇಶದ ನಡೆದಿದ್ದು ಕಿರಿದಾದ ಲೇನ್‌ನಲ್ಲಿರುವ ಕಟ್ಟಡದಿಂದ ಎಂಟು ಜನರನ್ನು ರಕ್ಷಿಸಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. ಏಮ್ಸ್ ಟ್ರಾಮಾ ಸೆಂಟರ್‌ನ ಬರ್ನ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ವಾರ್ಡ್‌ಗೆ ದಾಖಲಾಗಿದ್ದ ಮೂವರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾಗೆಯೇ ಸಫ್ದರ್ಜಂಗ್ ಆಸ್ಪತ್ರೆಯ ಬರ್ನ್ಸ್ ವಾರ್ಡ್‌ಗೆ ದಾಖಲಾಗಿದ್ದ ಐದು ಜನರಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆದರೆ ಇನ್ನೂ ಮೂವರು ಮಹಿಳೆಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗುತ್ತಿದೆ.


ಹಾಗೂ ದೆಹಲಿಯ ತುಘಲಕಾಬಾದ್ ಪ್ರದೇಶದ ಕಟ್ಟಡವೊಂದರಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಹೊತ್ತಿಕೊಂಡು, ಮೂವರು ಸಾವನ್ನಪ್ಪಿದ್ದಾರೆ. ದೆಹಲಿ ಅಗ್ನಿಶಾಮಕ ದಳ (ಡಿಎಫ್‌ಎಸ್) ಸಿಬ್ಬಂದಿ ಈವರೆಗೆ ಐವರನ್ನು ರಕ್ಷಿಸಿದ್ದಾರೆ  ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಸುಕಿನ 2:25 ರ ಸುಮಾರಿಗೆ ಅಗ್ನಿಶಾಮಕ ಇಲಾಖೆಗೆ ಅಗ್ನಿ ಅವಘಡದ ಬಗ್ಗೆ ಕರೆ ಬಂದಿತು. ತಕ್ಷಣವೇ ಮೂರು ಅಗ್ನಿಶಾಮಕ ವಾಹನಗಳು, ಎರಡು ನೀರಿನ ಬೌಸರ್‌ಗಳು, ಒಂದು ಉಸಿರಾಟದ ಬೆಂಬಲ ಘಟಕ ಮತ್ತು ಒಂದು ತ್ವರಿತ ಪ್ರತಿಕ್ರಿಯೆ ವಾಹನ  ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ. ರಕ್ಷಣಾ ತಂಡಗಳು ಕಟ್ಟಡದಿಂದ ನಿವಾಸಿಗಳನ್ನು ರಕ್ಷಿಸಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಿವೆ. ಕಟ್ಟಡದೊಳಗೆ ನಿಲ್ಲಿಸಿದ್ದ ವಾಹನಗಳಿಂದ ಬೆಂಕಿ ಸಂಭವಿಸಿದೆ. ಶೀಘ್ರದಲ್ಲೇ ಹೊಗೆ ಇಡೀ ಕಟ್ಟಡವನ್ನು ಆವರಿಸಿ, ಹಲವು ನಿವಾಸಿಗಳು ಒಳಗೆ ಸಿಲುಕಿಕೊಂಡರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮತ್ತು ನೆಲ ಮಹಡಿ, ಮೊದಲ ಮಹಡಿ ಮತ್ತು ಎರಡನೇ ಮಹಡಿ ಬೆಂಕಿಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಮೂರು, ನಾಲ್ಕು ಮತ್ತು ಐದನೇ ಮಹಡಿಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿಯು ಮೇಲ್ಛಾವಣಿಗೆ ತೆರಳಿ, ಟೆರೇಸ್ ಗೇಟ್‌ನ ಬೀಗ ತೆರೆದು ಕಟ್ಟದೊಳಗೆ ಪ್ರವೇಶಿ ಒಳಗೆ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಕೊನೆಗೂ ಬೆಂಕಿಯನ್ನು ಬೆಳಗಿನ ಜಾವ 3:45 ರ ಹೊತ್ತಿಗೆ ನಿಯಂತ್ರಣಕ್ಕೆ ತರಲಾಯಿತು. ಕಾರ್ಯಾಚರಣೆ ಬೆಳಗ್ಗೆ 4 ಗಂಟೆಗೆ ಪೂರ್ಣಗೊಂಡಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.