ಶಬರಿಮಲೆ/ಬೆಂಗಳೂರು: ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ, ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟರು. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ತದನಂತರ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಲಿದೆ ಎನ್ನಲಾಗಿದೆ.

ಹಾಗೂ ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದು, ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗುವರು. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಇದಕ್ಕೂ ಮೊದಲು ಅವರು ಹಲವು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದರು.

ಆದರಿಂದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ.ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರ ತಂಡದೊಂದಿಗೆ ಕೇಂದ್ರ ಸಚಿವ ಹೆಚ್‌ಡಿಕೆ ಯಾತ್ರೆ ಕೈಗೊಂಡಿದ್ದಾರೆ ಎಂಬುದ್ದಾಗಿದೆ.















