ಮನೆ ರಾಷ್ಟ್ರೀಯ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

0

ನವದೆಹಲಿ (New Delhi): ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜು.21 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಮನ್ಸ್‌ ಜಾರಿಗೊಳಿಸಲಾಗಿದೆ.

ಜೂನ್ 2ರಂದು ಕೋವಿಡ್‌ ದೃಢಪಟ್ಟ ನಂತರ 75 ವರ್ಷದ ಸೋನಿಯಾ ಗಾಂಧಿ ಇಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹಲವು ಬಾರಿ ಸಮನ್ಸ್ ನೀಡಿದರೂ ಕೋವಿಡ್ ಸೋಂಕು, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಏಜೆನ್ಸಿಯ ಮುಂದೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೇಳಿದ್ದರು.

ಸೋನಿಯಾ ಗಾಂಧಿಯವರ ಪುತ್ರ ರಾಹುಲ್ ಗಾಂಧಿ ಅವರು ಇದೇ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ಎದುರು ಐದು ದಿನಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇದಕ್ಕೂ ಮುನ್ನ ಇಡಿ ತನಿಖೆಯ ಭಾಗವಾಗಿ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.