ಮನೆ ರಾಜ್ಯ ರಾಜ್ಯದಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,694ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,082ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,32,852ಕ್ಕೆ ಏರಿಕೆಯಾಗಿದೆ. ಇನ್ನು 6,718 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 621 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,13,517ಕ್ಕೆ ಏರಿಕೆಯಾಗಿದೆ.