ಮನೆ ರಾಜ್ಯ ಮಡಿಕೇರಿ: ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ

ಮಡಿಕೇರಿ: ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ

0

ಮಡಿಕೇರಿ(Madikeri): ಧಾರಾಕಾರ ಮಳೆಯಿಂದ ವ್ಯಾಪಕವಾಗಿ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರ ಸಮಸ್ಯೆ ಆಲಿಸಿ, ಪರಿಹಾರದ ಚೆಕ್ ವಿತರಿಸಿದರು.

ಸಂಪುಟದ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರವಾಸ ಕೈಗೊಂಡಿರುವ ಸಿಎಂ, ಜಿಲ್ಲೆಯಲ್ಲಿ ಮಳೆಗೆ ಆದ ಆಸ್ತಿಪಾಸ್ತಿ ನಷ್ಟ, ಜನಹಾನಿ, ತೊಂದರೆ ಮತ್ತು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ಉಸ್ತುವಾರಿ ಸಚಿವರು, ಕಂದಾಯ ಸಚಿವ ಆರ್ ಅಶೋಕ್, ಸಿ.ಸಿ ಪಾಟೀಲ್, ಆರ್ ನಾಗೇಶ್ ಸಂಸದರಾದ ಪ್ರತಾಪ್ ಸಿಂಹ, ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ. ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಕಡೆ ಭೂಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕಡಲುಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಯಾಗಿದೆ. ಪ್ರಥಮ ಹಂತದ ಸಮೀಕ್ಷೆಯಾಗಿದೆ. ಈ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು ಎಂದರು.

ಪರಿಹಾರ ವಿತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.