ಮನೆ ಉದ್ಯೋಗ ಜಲಸಂಪನ್ಮೂಲ ಇಲಾಖೆಯಲ್ಲಿ ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಜಲಸಂಪನ್ಮೂಲ ಇಲಾಖೆಯಲ್ಲಿ ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

0

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ  155 ಬ್ಯಾಕ್​ಲಾಗ್​ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್​​ 10ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರ 155 ಹುದ್ದೆಗಳು ಖಾಲಿ ಇದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. 21400-42000 ರೂ ಪ್ರತಿ ತಿಂಗಳು ವೇತನ ಸೌಲಭ್ಯ ಇರಲಿದೆ.

ಶೈಕ್ಷಣಿಕ ಅರ್ಹತೆ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ: ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಸಲ್ಲಿಕೆ: ಆನ್​ಲೈನ್​ ಮುಖಾಂತರ

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ಮೆರಿಟ್ ಪಟ್ಟಿ

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-07-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಆಗಸ್ಟ್-2022

ಅಧಿಕೃತ ವೆಬ್‌ಸೈಟ್: waterresources.karnataka.gov.in

ಅರ್ಜಿ ಸಲ್ಲಿಕೆ ವಿಧಾನ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ