ಮನೆ ರಾಜ್ಯ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರ್ಕಾರ

ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರ್ಕಾರ

0

ಬೆಂಗಳೂರು (Bengaluru): ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಲಾಗಿದೆ.

ಈ ಮೇಲ್ಕಂಡ ವರ್ಗಾವಣೆ ಆದೇಶದಿಂದಾಗಿ ಸ್ಥಳ ನಿರೀಕ್ಷೆಯಲ್ಲಿರುವ ಇ.ಎಸ್.ವೀರಭದ್ರಯ್ಯ ಎಸ್ಪಿ (ನಾನ್ ಐಪಿಎಸ್) ಅವರು ಮುಂದಿನ ಸ್ಥಳ ನಿಯುಕ್ತಿಗಾಗಿ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ.ಎಲ್.ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಲಕ್ಷ್ಮೀ ಗಣೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಪೊಲೀಸ್ ಅಧೀಕ್ಷಕರನ್ನಾಗಿ ಟ್ರಾನ್ಸಫರ್ ಮಾಡಲಾಗಿದೆ.

ಹಾಸನ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಬಿ.ಎನ್.ನಂದಿನಿ ಅವರನ್ನು ಮೈಸೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮೈಸೂರು ಜಿಲ್ಲೆಯ ಹೆಚ್ಚು ಪೊಲೀಸ್ ಅಧೀಕ್ಷಕರಾಗಿದ್ದ ಆರ್.ಶಿವಕುಮಾರ್ ಅವರನ್ನು ರಾಯಚೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಈ ಮೇಲ್ಕಂಡ ಎಲ್ಲ ಅಧಿಕಾರಿಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ಕೂಡಲೇ ಬಿಡುಗಡೆಗೊಳಿಸಿ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲು ಸೂಚಿಸಲಾಗಿದೆ.