ಮನೆ ರಾಜ್ಯ ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: 1231 ಮಂದಿಗೆ ಪಾಸಿಟಿವ್‌

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: 1231 ಮಂದಿಗೆ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1231 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,81,816ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಸಾವಿನ ಸಂಖ್ಯೆ 40083 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1047 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,35,088ಕ್ಕೆ ಏರಿಕೆಯಾಗಿದೆ. ಇನ್ನು 6603 ಸಕ್ರಿಯ ಪ್ರಕರಣಗಳಿವೆ

ಬೆಂಗಳೂರಿನಲ್ಲಿ 1124 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,15,473ಕ್ಕೆ ಏರಿಕೆಯಾಗಿದೆ.