ಮನೆ ಅಪರಾಧ ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ

0

ಶಿವಮೊಗ್ಗ(Shivamogga): ವಿನೋಬ ನಗರದ ಪೋಲಿಸ್ ಚೌಕಿ ಎದುರು ರೌಡಿಶೀಟರ್ ಹಂದಿ ಅಣ್ಣಿಯನ್ನು (ಅಣ್ಣಪ್ಪ) ಗುರುವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆಗೈಯಲಾಗಿದೆ.

ವಿನೋಬ ನಗರ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಮುಖ್ಯ ರಸ್ತೆಯಲ್ಲಿಯೇ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ತಲೆ ಒಡೆದು ಹೋಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.

ಹಂದಿ ಅಣ್ಣಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಹೆಬ್ಬೆಟ್ಟು ಮಂಜನ ಸಹವರ್ತಿಯಾಗಿ ಗುರುತಿಸಿಕೊಂಡಿದ್ದನು. ನಾಲ್ಕು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.